ಪಾದುಕ ಕುಟಿರ ಉದ್ಘಾಟನೆ

gan (3)
Published on

ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್ ಸಮೀಪ ಸಮಾಜ ಕಲ್ಯಾಣ ಇಲಾಖೆಯ ಡಾ.ಬಾಬಾ ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಆರ್ಥಿಕ ನೆರವಿನಿಂದ ನಿರ್ಮಾಣಗೊಂಡ ಪಾದುಕ ಕುಟಿರವನ್ನು ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನದಾಸ್ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪುರಸಭಾ ಉಪಾಧ್ಯಕ್ಷೆ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ ವಿ., ಸದಸ್ಯರಾದ ದೇವಕಿ ಸಣ್ಣಯ್ಯ, ರೋಹಿಣಿ ಉದಯ್, ಶೇಖರ್ ಪೂಜಾರಿ, ಪಶು ವೈದ್ಯಾಧಿಕಾರಿ ಡಾ. ಅರುಣ್ ಕುಮಾರ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಇಲಾಖೆಯ ಜಿಲ್ಲಾ ಸಂಯೋಜಕ ತಿಪ್ಪೇಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

ಪತ್ರಕರ್ತ ನಾಗರಾಜ್ ರಾಯಪ್ಪನ ಮಠ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆ ಮಾಲೀಕ ವಿಷ್ಣು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net