ಉತ್ತಮ ರೀತಿಯಲ್ಲಿ ಜೀವನ ನಿರ್ವಹಣೆ

throball
Published on

ಶಿರ್ವ: ಮಹಿಳೆಯರು ತಮ್ಮ ಜೀವನದ ಅನೇಕ ಪಾತ್ರವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿದರೂ, ಸಾಸಿವೆಯಷ್ಟು ಗೆಲುವು ಪಡೆಯಲು ಸಮುದ್ರದಷ್ಟು ಶ್ರಮಪಡಬೇಕು. ಕ್ರೀಡೆಯಲ್ಲಿ ತೊಡಗಿಕೊಳ್ಳುವುದು ಮಾನಸಿಕ ಹಾಗೂ ದೈಹಿಕವಾಗಿ ಹೆಚ್ಚು ಪರಿಣಾಮಕಾರಿ ಎಂದು ಕಾಪು ತಹಸೀಲ್ದಾರ್ ಪ್ರತಿಭಾ ಆರ್. ಹೇಳಿದರು.

ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ 2024-25ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಥ್ರೋಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಇಂಜಿನಿಯರಿಂಗ್ ಕಾಲೇಜಿನ ಒಟ್ಟು ಒಂಬತ್ತು ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಮಂಗಳೂರು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಹಾಗೂ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮಂಗಳೂರು ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದರು. ಸಂಸ್ಥೆ ಆಡಳಿತ ಮಂಡಳಿ ಸದಸ್ಯ ಹರೀಶ್ ಬೆಳ್ಮಣ್, ದೈಹಿಕ ಶಿಕ್ಷಣ ನಿರ್ದೇಶಕ ಪೌಲ್ ಸೂರಜ್, ಶುಭಶ್ರೀ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net