

ವಿಜಯವಾಣಿ ಸುದ್ದಿಜಾಲ ಉಡುಪಿ
ನನ್ನ ವಿನಂತಿಯ ಮೇರೆಗೆ ಉಡುಪಿ ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳ ಶೌಚಾಲಯ ನಿರ್ಮಾಣಕ್ಕೆ ಎಂಆರ್ಪಿಎಲ್ ಸಂಸ್ಥೆಯು ತನ್ನ ಸಿಎಸ್ಆರ್ ನಿಧಿಯಿಂದ ಸುಮಾರು 2 ಕೋಟಿ ರೂ. ಅನುದಾನ ನೀಡಿದ್ದು, ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ವಿಶೇಷ ಸಹಕಾರ ನೀಡಿದೆ. ವಳಕಾಡು ಶಾಲೆಯ ಶೌಚಾಲಯ ನಿರ್ಮಾಣಕ್ಕೆ ಆರ್ಥಿಕ ಸಹಕಾರ ನೀಡಿದ ಸಂಸ್ಥೆಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಉಡುಪಿಯ ವಳಕಾಡಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎಂಆರ್ಪಿಎಲ್ ಸಂಸ್ಥೆಯಿಂದ ಮಂಜೂರಾಗಿದ್ದ 19 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಶೌಚಾಲಯದ ಕಟ್ಟಡವನ್ನು ಜೂ.27ರಂದು ಉದ್ಘಾಟಿಸಿ ಮಾತನಾಡಿದರು.
ಎಂಆರ್ಪಿಎಲ್ ಸಂಸ್ಥೆಯ ಅಧಿಕಾರಿ ದಯಾನಂದ ಪ್ರಭು, ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ.ವಿರೂಪಾಕ್ಷ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಹೆಗ್ಡೆ, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ ಶೇಟ್, ಜಿಪಂ ಶಿಕ್ಷಣ ಸಮಿತಿ ಉಪಾಧ್ಯಕ್ಷ ನಾಗಭೂಷಣ ಶೇಟ್, ಗೌರವ ಸಲಹೆಗಾರರಾದ ಡಾ. ಎಂ.ಆರ್. ಹೆಗ್ಡೆ, ತಾರಾ, ಮುಖ್ಯ ಶಿಕ್ಷಕಿಯರಾದ ಕುಸುಮಾ, ಪೂರ್ಣಿಮಾ ಹಾಗೂ ವಿದ್ಯಾರ್ಥಿಗಳು ಇದ್ದರು.