

ಮೈಸೂರು: ಹುಣಸೂರು ಮತ್ತು ಪಿರಿಯಾಪಟ್ಟಣದ ನ್ಯಾಯಾಧೀಶರ ನಿವಾಸಗಳ ವರ್ಚುವಲ್ ಉದ್ಘಾಟನೆ ಮತ್ತು ಜಿಲ್ಲಾ ನ್ಯಾಯಾಂಗ ನೌಕರರ ಸಂಘದ ಕಟ್ಟಡ ಮತ್ತು ಮೈಸೂರಿನ ಮಳಲವಾಡಿಯ ಹೊಸ ನ್ಯಾಯಾಲಯಗಳ ಸಂಕೀರ್ಣದಲ್ಲಿ ಎರಡು ಹೆಚ್ಚುವರಿ ಲಿಫ್ಟ್‌ಗಳ ಉದ್ಘಾಟನಾ ಕಾರ್ಯಕ್ರಮವನ್ನು ಫೆ.13 ರಂದು ಸಂಜೆ 6 ಗಂಟೆಗೆ ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ನ್ಯಾ.ಪಿ. ಎಸ್. ದಿನೇಶ್ ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ಆಡಳಿತಾತ್ಮಕ ನ್ಯಾಯಾಮೂರ್ತಿಗಳಾದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ನ್ಯಾಯಾಂಗ ಅಕಾಡೆಮಿ, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಅಧ್ಯಕ್ಷರಾದ ನ್ಯಾ.ಕೆ. ಸೋಮಶೇಖರ್ ಅವರು ಮುಖ್ಯ ಅತಿಥಿಗಳಾಗಿ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ನ್ಯಾ. ಟಿ.ಜಿ.ಶಿವಶಂಕರೇಗೌಡ, ಕರ್ನಾಟಕ ಉಚ್ಚ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿಗಳಾದ ಕೆ.ಎಸ್ ಭರತ್ ಕುಮಾರ್ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.