ಹಿರೇಕೆರೂರಲ್ಲಿ ವಿಘ್ನೇಶ್ವರ, ಆಂಜನೇಯಸ್ವಾಮಿ ದೇಗುಲ ಉದ್ಘಾಟನೆ ಮೇ 16ರಿಂದ

Vigneshwar Temple at hirekerur
Published on

ಹಿರೇಕೆರೂರ: ಪಟ್ಟಣದ ಪೊಲೀಸ್ ಮೈದಾನದಲ್ಲಿ ಕಲ್ಲಿನಿಂದ ನೂತನವಾಗಿ ನಿರ್ವಣಗೊಂಡ ವಿಘ್ನೕಶ್ವರ, ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಮೇ 16 ಮತ್ತು 17ರಂದು ನಡೆಯಲಿದೆ ಎಂದು ವಿಘ್ನೕಶ್ವರ, ಆಂಜನೇಯಸ್ವಾಮಿ ದೇವಸ್ಥಾನ ಜೀಣೋದ್ಧಾರ ಸಮಿತಿ ಅಧ್ಯಕ್ಷ ವಿಜಯಪ್ಪ ಬಂಗೇರ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಕ್ತರು, ಅಧಿಕಾರಿಗಳು ಹಾಗೂ ಸಾರ್ವಜನಿಕರ ವಂತಿಗೆಯಿಂದ ಭವ್ಯವಾಗಿ ಕಲ್ಲಿನಿಂದ ನಿರ್ವಣಗೊಂಡ ದೇವಸ್ಥಾನದ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಸೇರಿದಂತೆ ಎಲ್ಲ ಧಾರ್ವಿುಕ ಕಾರ್ಯಕ್ರಮದಲ್ಲಿ ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದರು.

ಮೇ 16ರಂದು ಬೆಳಗ್ಗೆ 8 ಗಂಟೆಗೆ ವಿಘ್ನೕಶ್ವರ ಹಾಗೂ ಆಂಜನೇಯ ಸ್ವಾಮಿ ಮೂರ್ತಿಗಳ ಭವ್ಯ ಮೆರವಣಿಗೆ ನಡೆಯಲಿದೆ. ಪಟ್ಟಣದ ಜಿ.ಬಿ. ಶಂಕರರಾವ್ ವೃತ್ತದಿಂದ ಸರ್ವಜ್ಞ ವೃತ್ತದವರೆಗೆ ಸಕಲ ವಾದ್ಯಗಳು ಹಾಗೂ ಮುರಡೇಶ್ವರದ ಚಂಡಿಕಾ ವಾದ್ಯ, ಕನವಳ್ಳಿಯ ಗೊಂಬೆಗಳ ಕುಣಿತ ಹಾನಗಲ್ಲ ಸುಗಂಧಿ ಕಲಾ ತಂಡದ ಕಹಳೆ ಮತ್ತು ಪೂರ್ಣ ಕುಂಭ ಮೇಳಗಳೊಂದಿಗೆ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ ನಡೆಯಲಿದೆ.

ಅದೇ ದಿನ ಸಂಜೆ ಎರಡೂ ಮೂರ್ತಿಗಳಿಗೆ ಧಾರವಾಡದ ಸಂತೋಷ ಭಟ್ ಹಾಗೂ ಸಂಗಡಿಗರಿಂದ ಧಾರ್ವಿುಕ ಕಾರ್ಯ ಜರುಗಲಿದೆ. ಶನಿವಾರ ಬೆಳಗ್ಗೆ 8.48ಕ್ಕೆ ರಟ್ಟಿಹಳ್ಳಿ ಕಬ್ಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಘ್ನೕಶ್ವರ ಹಾಗೂ ಆಂಜನೇಯ ಸ್ವಾಮಿ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಡೆಯಲಿದೆ.

ಬೆಳಗ್ಗೆ 11 ಗಂಟೆಗೆ ಧಾರ್ವಿುಕ ಸಭಾ ಕಾರ್ಯಕ್ರಮ ಜರುಗಲಿದ್ದು, ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಯು.ಬಿ. ಬಣಕಾರ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಬಸವರಾಜ ಶಿವಣ್ಣನವರ, ವಿಪ ಸದಸ್ಯ ಸಲೀಂ ಅಹ್ಮದ್, ಮಾಜಿ ಸಚಿವ ಬಿ.ಸಿ. ಪಾಟೀಲ, ಮಾಜಿ ಶಾಸಕರಾದ ಬಿ.ಎಚ್. ಬನ್ನಿಕೋಡ, ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಮುಖ್ಯ ಸಚೇತಕ ಡಿ.ಎಂ. ಸಾಲಿ, ಟಿಎಪಿಎಂಎಸ್ ಅಧ್ಯಕ್ಷ ಎಸ್.ಎಸ್. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಇತರರು ಭಾಗವಹಿಸುವರು.

ಸಿಪಿಐ ಬಸವರಾಜ ಪಿ.ಎಸ್., ಪಿ.ಎಸ್.ಐ. ನೀಲಪ್ಪ ನರನಾಲ, ಜೀಣೋದ್ಧಾರ ಸಮಿತಿ ಪದಾಧಿಕಾರಿಗಳಾದ ಲೋಕಪ್ಪ ಸಂಕೊಳ್ಳಿ, ಸತೀಶ ನಾಡಿಗೇರ, ಮಹೇಂದ್ರ ಬಡಳ್ಳಿ, ಗುರುಶಾಂತಪ್ಪ ಎತ್ತಿನಹಳ್ಳಿ, ರುದ್ರಮುನಿ ಹುಲ್ಮನಿ, ಬಸವರಾಜ ಕಾಲ್ವೀಹಳ್ಳಿ, ದುರ್ಗಪ್ಪ ನೀರಲಗಿ, ಬಸವರಾಜ ಚಿಂದಿ, ರುದ್ರಪ್ಪ ಶೆಟ್ಟರ್, ಗುರುಮೂರ್ತಿ ನಾಡಿಗೇರ, ಯುವರಾಜ ಪಾಳೇದ, ಶ್ರೀನಿವಾಸ ಶಿರಗಂಬಿ, ರಾಮು ಮುರಡೇಶ್ವರ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net