ಇಂದು ಗೋದಾಮು ಮಳಿಗೆಗಳ ಉದ್ಘಾಟನೆ

ನಂಜರಾಯಪಟ್ಟಣ ಸಹಕಾರ ಸಂಘದ ನೂತನ ಬಹುಸೇವಾ ಕೇಂದ್ರ
Published on

ಮಡಿಕೇರಿ: ಕುಶಾಲನಗರ ತಾಲೂಕು ನಂಜರಾಯಪಟ್ಟಣ ವಿವಿದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ವತಿಯಿಂದ ನಬಾರ್ಡ್ ಸಹಯೋಗದಲ್ಲಿ ನಿರ್ಮಿಸಲಾದ ನೂತನ ಬಹುಸೇವಾ ಕೇಂದ್ರದ ಗೋದಾಮು ಮಳಿಗೆಗಳು, ನೂತನ ಕಚೇರಿ, ಆಡಳಿತ ಸಭಾಂಗಣ ಮತ್ತು ನೂತನ ಸಹಕಾರ ಭವನದ ಉದ್ಘಾಟನಾ ಸಮಾರಂಭ ಆ.೨೦ ರಂದು ಬೆಳಗ್ಗೆ ೧೧ ಗಂಟೆಗೆ ನಂಜರಾಯಪಟ್ಟಣದಲ್ಲಿ ನಡೆಯಲಿದೆ.


ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿರವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿ?ತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಮಾಜಿ ಕ್ರೀಡಾ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಪಿ.ಬಾಂಡ್ ಗಣಪತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಸಹಕಾರ ಸಂಘಗಳ ಉಪನಿಬಂಧಕ ಎಂ.ಎಸ್.ಕೃ?್ಣ ಪ್ರಸಾದ್, ಸಹಕಾರ ಸಂಘಗಳ ಸಹಾಯಕ ನಿಬಂಧಕರು ಎಂ.ಈ.ಮೋಹನ್, ನಂಜರಾಯಪಟ್ಟಣ ವಿವಿದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಬಿ.ಸಿ.ಮಾದಯ್ಯ(ಮುರುಳಿ), ಇತರರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net