ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

IMG-20240825-WA0055
Published on

ತಗಡೂರು: ಡಿಕೆ ಹುಂಡಿ ಹಾಗೂ ಬಸವನಗುಡಿ ಬಳಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ನೂತನವಾಗಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು.

ತಗಡೂರು ವರುಣ ವಿಧಾನಸಭಾ ಕ್ಷೇತ್ರದಲ್ಲಿಯೇ ದೊಡ್ಡ ಗ್ರಾಮವಾಗಿದೆ. ಎಷ್ಟೇ ಅನುದಾನ ನೀಡಿದರೂ ಸಾಕಾಗುವುದಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನವನ್ನು ಕೊಡಿಸುವುದಾಗಿ ಭರವಸೆ ನೀಡಿದರು. ಗ್ರಾಮಸ್ಥರ ಕೋರಿಕೆ ಮೇರೆಗೆ ಸಾರಿಗೆ ಬಸ್ ನಿಲ್ದಾಣ ಸೌಲಭ್ಯ ಕಲ್ಪಿಸುವುದಾಗಿ ಹೇಳಿದರು.

ತಗಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಾವತಿ ಬಸವರಾಜು, ಉಪಾಧ್ಯಕ್ಷ ಗುರುಮಲ್ಲೇಶ್, ಸದಸ್ಯರು, ಅಭಿವೃದ್ಧಿ ಅಧಿಕಾರಿ ಬಸವಣ್ಣ, ಪ್ರಸಾದ್, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net