ಆರ್ಥಿಕ ಅಭಿವೃದ್ಧಿಗೆ ಪೂರಕ ಪಠ್ಯಕ್ರಮವಿರಲಿ

UDP-9-3-PPC
ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರವನ್ನು ಡಾ. ಹರೀಶ್​ ಜೋಶಿ ಉದ್ಘಾಟಿಸಿದರು. ಡಾ.ರಾಮು. ಎಲ್​., ಡಾ.ವಿನಯ್​ ಕುಮಾರ್​, ಪ್ರೊ. ಶಿವಕುಮಾರ್​, ಪ್ರೊ. ಸೌಮ್ಯಾ ಶೆಟ್ಟಿ, ಅಪೂರ್ವಾ ಓಸ್ಟ ಇದ್ದರು.
Published on

ಪ್ರಾಧ್ಯಾಪಕ ಡಾ. ಹರೀಶ್​ ಜೋಶಿ ಅಭಿಪ್ರಾಯ | ಕಾರ್ಯಾಗಾರ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ
ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತಹ ಹೊಸ ಪಠ್ಯಕ್ರಮಗಳಿದ್ದಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕತೆಯತ್ತ ಗಮನ ಹರಿಸಲು ಸಹಾಯಕವಾಗುತ್ತದೆ. ಹೀಗಾಗಿ ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿ ಸಮೂಹವನ್ನು ಬೆಂಬಲಿಸಿದರೆ ದೇಶದ ಅಭಿವೃದ್ಧಿ ಸಾಧ್ಯ ಎಂದು ಮಣಿಪಾಲ್​ ಅಕಾಡೆಮಿ ಆಫ್​ ಹೈಯರ್​ ಎಜುಕೇಶನ್​ನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಡಾ. ಹರೀಶ್​ ಜೋಶಿ ಅಭಿಪ್ರಾಯಪಟ್ಟರು.

ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ವ್ಯವಹಾರ ಅಧ್ಯಯನ ಮತ್ತು ನಿರ್ವಹಣಾ ಅಧ್ಯಾಪಕರ ಒಕ್ಕೂಟ ಇತ್ತೀಚೆಗೆ ಜಂಟಿಯಾಗಿ ಏರ್ಪಡಿಸಿದ್ದ ರಾಜ್ಯ ಹೊಸ ಶಿಕ್ಷಣ ನೀತಿಯ ಅನುಸಾರ ಬಿಬಿಎ ಪ್ರಥಮ ಸೆಮಿಸ್ಟರ್​ನ ಪರಿಷ್ಕೃತ ಪಠ್ಯಕ್ರಮಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಅಭಿವೃದ್ಧಿಗೆ ಸಹಕಾರಿ

ಕಾರ್ಯಾಗಾರದ ಸಮಾರೋಪದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ರಾಮು ಎಲ್​. ಮಾತನಾಡಿ, ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಹಾಗೂ ಅಧ್ಯಾಪಕರ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದರು.

ಕಾರ್ಯಾಗಾರದಲ್ಲಿ ಬಿಬಿಎ ಅಧ್ಯಾಪಕರ ಒಕ್ಕೂಟದ ಅಧ್ಯಕ್ಷ ಡಾ. ಚಂದ್ರಶೇಖರ್​, ಕಾರ್ಯದರ್ಶಿ ಪ್ರೊ. ನಂದಕಿಶೋರ್​, ಕೋಶಾಧಿಕಾರಿ ಪ್ರೊ. ಹಾರ್ದಿಕ್​ ಪಿ. ಚವ್ಹಾಣ್​, ಪೂರ್ಣಪ್ರಜ್ಞಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ಡಾ.ವಿನಯ್​ ಕುಮಾರ್​, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಶಿವಕುಮಾರ್​, ಕಾರ್ಯಾಗಾರದ ಸಂಯೋಜಕಿ ಪ್ರೊ. ಸೌಮ್ಯಾ ಶೆಟ್ಟಿ ಉಪಸ್ಥಿತರಿದ್ದರು.

ಮಂಗಳೂರು ವಿವಿಯ ವಿವಿಧ ಕಾಲೇಜುಗಳು, 85 ಉಪನ್ಯಾಸಕರು ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು. ಪ್ರತಿಭಾ ಭಟ್​, ವಾಗ್ದೇವಿ ಮಧ್ಯಸ್ಥ ಪ್ರಾರ್ಥಿಸಿದರು. ಕಾರ್ಯಾಗಾರದ ಸಂಯೋಜಕಿ ಅಪೂರ್ವಾ ಓಸ್ಟ ವಂದಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಪ್ರೊ. ಧನ್ಯಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಸಮಾರೋಪ ಸಮಾರಂಭವನ್ನು ಜಯಲಕ್ಷ್ಮೀ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net