ಭಾಷಾ ಸಂವಹನ, ಪುರಾಣ ಜ್ಞಾನವೃದ್ಧಿಗೆ ಯಕ್ಷಗಾನ ಸಹಕಾರಿ : ಜಯಂತ್ ಶೆಟ್ಟಿ

patla
ಯಕ್ಷಧ್ರುವ ಪಟ್ಲ ಫೌಂಡೇಷನ್ ವತಿಯಿಂದ ನಡೆಸುವ ಯಕ್ಷಧ್ರುವ-ಯಕ್ಷಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿಯನ್ನು ಜಯಂತ್ ಶೆಟ್ಟಿ ಉದ್ಘಾಟಿಸಿದರು.
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ಯಕ್ಷಧ್ರುವ ಪಟ್ಲ ಫೌಂಡೇಷನ್ ವತಿಯಿಂದ ನಡೆಸುವ ಯಕ್ಷಧ್ರುವ-ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ಪ್ರಯುಕ್ತ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ತರಗತಿ ಶುಕ್ರವಾರ ಚಾಲನೆಗೊಂಡಿತು.

ಯಕ್ಷಧ್ರುವ ಪಟ್ಲ ಫೌಂಡೇಷನ್ ಪುಂಜಾಲಕಟ್ಟೆ ಘಟಕದ ಗೌರವ ಮಾರ್ಗದರ್ಶಿ ಜಯಂತ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಯಕ್ಷಗಾನ ನೃತ್ಯ, ಹಾಡು, ಮಾತು, ವೇಷ-ಭೂಷಣ, ಸಂಗೀತ ಒಳಗೊಂಡ ಸರ್ವಾಂಗೀಣ ಕಲೆಯಾಗಿದ್ದು, ವಿದ್ಯಾರ್ಥಿಗಳಿಗೆ ಭಾಷಾ ಸಂವಹನ, ನಡೆನುಡಿ, ಪುರಾಣ ಜ್ಞಾನವೃದ್ಧಿ, ವ್ಯಾಯಾಮಕ್ಕೆ ಪೂರಕ ಎಂದರು.

ಘಟಕ ಅಧ್ಯಕ್ಷ ಯಶೋಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಂಪ್ರಸಾದ್ ಸಂಪಿಗೆತ್ತಾಯ, ಯಕ್ಷಗುರುಗಳಾದ ರಕ್ಷಿತ್ ಶೆಟ್ಟಿ ಪಡ್ರೆ, ಸಾಯಿಸುಮಾ ನಾವಡ, ದಿವಾಕರ ದಾಸ್ ಕಾವಳಕಟ್ಟೆ, ಘಟಕ ಮಹಿಳಾ ಸಮಿತಿ ಪ್ರಮುಖರಾದ ಲಕ್ಷ್ಮೀ ಸಂಜೀವ ಶೆಟ್ಟಿ, ಉಮಾ ಡಿ.ಗೌಡ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಮಂಜಪ್ಪ, ಜಯರಾಮ ಶೆಟ್ಟಿ, ಕಿಶೋರ್ ಶೆಟ್ಟಿ, ಘಟಕ ಪ್ರಮುಖರಾದ ಪುರುಷೋತ್ತಮ ಪೂಜಾರಿ ಬೊಳೆಕ್ಕಿನಕೋಡಿ, ರಮೇಶ್ ಶೆಟ್ಟಿ ಮಜಲೋಡಿ, ಪ್ರಭಾಕರ ಪಿ.ಎಂ., ಉದಯ ಕುಮಾರ್ ಶೆಟ್ಟಿ, ಯೋಗೀಶ್ ಪೂಜಾರಿ, ವಿನೋದ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಕುಮಂಗಿಲ, ದಿನಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಉಪಪ್ರಾಂಶುಪಾಲ ಬಿ.ಉದಯ ಕುಮಾರ್ ಜೈನ್ ಸ್ವಾಗತಿಸಿ, ಪ್ರಸ್ತಾವನೆಗೈದರು. ರತ್ನದೇವ್ ಪುಂಜಾಲಕಟ್ಟೆ ವಂದಿಸಿದರು. ಶಿಕ್ಷಕ ನಿರಂಜನ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಸಹಕರಿಸಿದರು. ನಾಟ್ಯಗುರು ಶ್ರೀವತ್ಸ ಸೋಮಯಾಜಿ ಯಕ್ಷಗಾನ ನಾಟ್ಯ ತರಬೇತಿ ನಡೆಸಿಕೊಟ್ಟರು.

ಯಕ್ಷಗಾನ ಕಲೆ ಮತ್ತು ಕಲಾವಿದರನ್ನು ಬೆಳೆಸುವ ನಿಟ್ಟಿನಲ್ಲಿ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ವತಿಯಿಂದ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಉಚಿತವಾಗಿ ಯಕ್ಷಗಾನ ನಾಟ್ಯ ತರಬೇತಿ ನೀಡಲಾಗುತ್ತಿದೆ.-ದಿನೇಶ್ ಶೆಟ್ಟಿ ಕಾವಳಕಟ್ಟೆ, ಯಕ್ಷಗುರು https://www.vijayavani.net/mangalore-gold-theft-case-registerd-at-pandeshwara-police-station https://www.vijayavani.net/ambhika-yoga

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net