ವಿದ್ಯಾರ್ಥಿಗಳಿಗೆ ಆದಾಯ ತೆರಿಗೆಯ ಮಾಹಿತಿ

Income tax information for students
Published on

ಮಡಿಕೇರಿ:

ಮಡಿಕೇರಿ ರೋಟರಿ ಸಂಸ್ಥೆ ಹಾಗೂ ಆದಾಯ ತೆರಿಗೆ ಇಲಾಖೆಯ ಸಹಭಾಗಿತ್ವದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆದಾಯ ತೆರಿಗೆಯ ಬಗ್ಗೆ ಅರಿವು ಕಾರ್ಯಕ್ರಮ ಬುಧವಾರ ನಡೆಯಿತು.

ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷ ಎಂ. ಸುದಯ್ ನಾಣಯ್ಯ, ಆಡಳಿತ ವ್ಯವಸ್ಥೆ ಜಾರಿಗೆ ಬಂದಲ್ಲಿAದ ತೆರಿಗೆ ಸಂಗ್ರಹ ಅದರ ಭಾಗವಾಗಿ ಸೇರಿಕೊಂಡಿದೆ. ಈ ವಿಚಾರದಲ್ಲಿ ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ್ ಒಡೆಯರ್ ಉತ್ತಮ ಆಡಳಿತಗಾರರಾಗಿ ಪ್ರಸಿದ್ಧಿ ಪಡೆದಿದ್ದರು. ಸಂವಿಧಾನ ರಚನೆಯಾದ ನಂತರ ಅದರಡಿಯಲ್ಲಿ ರೂಪಿಸಿದ ಕಾಯ್ದೆಯನ್ವಯ ಭಾರತ ದೇಶದಲ್ಲಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈಶ್ವರ್ ಭಟ್ ಮಾತನಾಡಿ, ಆದಾಯ ತೆರಿಗೆ ಕಾಯ್ದೆಯಲ್ಲಿ ಆದಾಯವನ್ನು ವಿವಿಧ ರೀತಿಯಲ್ಲಿ ವಿಂಗಡಿಸಲಾಗಿದೆ. ಅದರನ್ವಯ ತೆರಿಗೆಯನ್ನು ಜನರಿಂದ ಪಡೆಯಲಾಗುತ್ತದೆ. ವಿದ್ಯಾರ್ಥಿಗಳಿಗೆ ತೆರಿಗೆಯ ಬಗ್ಗೆ ಏನೇ ಸಂಶಯಗಳಿದ್ದರೂ ಮುಕ್ತ ಮನಸ್ಸಿನಿಂದ ಬಗೆಹರಿಸಿಕೊಳ್ಳಬೇಕು. ಆ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ವಿದ್ಯಾರ್ಥಿಗಳಿಗೆ ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆದಾಯ ತೆರಿಗೆ ಇಲಾಖೆಯ ಅಧಿಕಾರಿ ದಿವಾಕರ್ ರಾವ್, ಆದಾಯ ತೆರಿಗೆ ಪಾವತಿಯಿಂದ ದೇಶದಲ್ಲಿ ಅತ್ಯುನ್ನತ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರಕ್ಕೆ ಸಾಧ್ಯವಾಗಿದೆ. ದೇಶದ ಅಭ್ಯುದಯದ ದೃಷ್ಟಿಯಿಂದ ಆದಾಯ ಗಳಿಸುವ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಆದಾಯ ತೆರಿಗೆ ಪಾವತಿಸಬೇಕು. ಆ ಮೂಲಕ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕೆಂದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ವಿಜಯ್, ಆದಾಯ ತೆರಿಗೆ ಇಲಾಖೆಯ ಸಿಬ್ಬಂದಿ ಸಂಭ್ರಮ್ ಇದ್ದರು. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಆದಾಯ ತೆರಿಗೆಯ ಮಹತ್ವದ ಕುರಿತು ಮಾಹಿತಿ ಪಡೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net