

ಶಿರ್ವ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ನಮ್ಮ ಸಂಸ್ಕೃತಿ ಜೀವನದಲ್ಲಿ ಅಳವಡಿಸುವುದರ ಜತೆಗೆ ಮಾನವೀಯ ಮೌಲ್ಯಗಳಿಗೆ ಪ್ರಾಮುಖ್ಯತೆ ನೀಡಬೇಕು ಎಂದು ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಹೇಳಿದರು.
ಬಂಟಕಲ್ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವರ್ಣೋತ್ಸವ 2025 ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಂಗಳೂರಿನ ಮಿರಾಫ್ರ ಟೆಕ್ನಾಲಜೀಸ್ ಪ್ರಾಕ್ಟಿಸ್ ಹೆಡ್ ಅನಾಲಾಗ್ ವಿನೋದ್ ಜಾನ್, ನಟ ಪೃಥ್ವಿ ಅಂಬಾರ್ ಮಾತನಾಡಿದರು. ಶ್ರೀ ಸೋದೆ ವಾದಿರಾಜ ಮಠದ ಉಪಾಧ್ಯಕ್ಷ ಪಿ.ಶ್ರೀನಿವಾಸ ತಂತ್ರಿ, ಸಂಸ್ಥೆ ಕಾರ್ಯದರ್ಶಿ ರತ್ನಕುಮಾರ್, ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್, ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಸಂಸ್ಥೆ ತಾಂತ್ರಿಕ ಕಾರ್ಯಕ್ರಮ ಸಂಯೋಜಕರಾದ ಡಾ.ರೆನಿಟಾ ಶರೋನ್ ಮೋನಿಸ್, ವರುಣ್ ಕೆ. ಉಪಸ್ಥಿತರಿದ್ದರು. ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಮುಖ್ಯಸ್ಥ ಅರುಣ್ ಉಪಾಧ್ಯಾಯ ಸ್ವಾಗತಿಸಿದರು. ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಲೊಲಿಟ ಪ್ರೀಯ ಕ್ಯಾಸ್ತಲಿನೋ ಅತಿಥಿಗಳನ್ನು ಪರಿಚಯಿಸಿದರು. ಸವಿತಾ ಶೆಣೈ ಹಾಗೂ ನಾಗರಾಜ್ ರಾವ್ ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿಗಳಾದ ಸುಮಯ್ಯ ರಿಯಾಝ್ ಮತ್ತು ವೈಭವ್ ಕಾರ್ಯಕ್ರಮ ನಿರೂಪಿಸಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ದೀಪಿಕಾ ಬಿ.ವಿ. ವಂದಿಸಿದರು. ನಂತರ ಕಾಲೇಜಿನ ಯಕ್ಷಗಾನ ಸಂಘ ಯಕ್ಷಸಿಂಚನದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನಗೊಂಡಿತು.
ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಂಗಳೂರಿನ ಎ.ಜೆ ಇಂಜಿನಿಯರಿಂಗ್ ಕಾಲೇಜು ವರ್ಣೋತ್ಸವ ಚಾಂಪಿಯನ್‌ಷಿಪ್ ಬಹುಮಾನ ಪಡೆದಿದ್ದು, ಎಸ್‌ಡಿಎಂ ಪಿಜಿ ಸೆಂಟರ್ ದ್ವಿತೀಯ ಸ್ಥಾನದೊಂದಿಗೆ ರನ್ನರ್‌ಅಪ್ ಬಹುಮಾನ ಪಡೆಯಿತು.
ಶಿಕ್ಷಣದ ಜತೆಗೆ ಇತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ತೊಡಗಿಕೊಂಡಾಗ ಸಮಾಜದಲ್ಲಿ ಏನಾದರೂ ಸಾಧಿಸಲು ಸಾಧ್ಯ. ಬದುಕಿಗೆ ಶಿಕ್ಷಣ ಅಗತ್ಯವಾದರೆ ಅದರೊಂದಿಗೆ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ನಾವು ಕರ್ತವ್ಯ ಮಾಡಬೇಕಾಗಿದೆ. ಸಮಾಜಕ್ಕೆ ನಮ್ಮಿಂದಾಗುವ ಒಳ್ಳೆಯ ಕಾರ್ಯ ಮಾಡಬೇಕು ಆಗ ಸಮಾಜ ನಮ್ಮನ್ನು ಗುರುತಿಸಿ ಗೌರವಿಸುತ್ತದೆ. -ಪೃಥ್ವಿ ಅಂಬಾರ್ ನಟ https://www.vijayavani.net/navodaya-sangh-is-a-model-for-the-country https://www.vijayavani.net/navodaya-sangh-is-a-model-for-the-country