ಹಿಂದು ಕಾರ್ಯಕರ್ತರ ಮೇಲೆ ದಾಳಿ ಹೆಚ್ಚಳಕ್ಕೆ ಖಂಡನೆ

15 LXR 2
ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಿಂದು ಜನಜಾಗೃತಿ ಸಮಿತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ದುಂಡಪ್ಪ ಸವಣೂರ, ಈರಣ್ಣ ಪೂಜಾರ, ಇತರರಿದ್ದರು.
Published on

ಲಕ್ಷ್ಮೇಶ್ವರ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹಿಂದು ಕಾರ್ಯಕರ್ತರ ಮೇಲೆ ದಾಳಿಗಳು ಹೆಚ್ಚಾಗಿವೆ. ಹಿಂದು ಸಂಘಟನೆಗಳ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿ ಹಿಂದು ಜನಜಾಗೃತಿ ಸಮಿತಿಯವರು ಶನಿವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್‌ನ ವೇಣುಗೋಪಾಲ ಅವರ ಹತ್ಯೆಯಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹಿಂದುಗಳ ಮೇಲೆ ದಾಳಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್‌ನವರು ಕಾನೂನು ದುರುಪಯೋಗ ಪಡಿಸಿಕೊಂಡು ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ದೇಶದಲ್ಲಿ 8 ಲಕ್ಷ ಎಕರೆ ಜಮೀನು ಕಬಳಿಸಲಾಗಿದೆ. ಇದೊಂದು ದೊಡ್ಡ ‘ಲ್ಯಾಂಡ್ ಜಿಹಾದ್’. ಇಂತಹ ಕಾನೂನನ್ನು ರದ್ದುಗೊಳಿಸಿ ಜಮೀನಿನ ನಿಜವಾದ ಮಾಲೀಕರಿಗೆ ಅಧಿಕಾರ ಮರಳಿಸಬೇಕು. ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಿ ಅಲ್ಪಸಂಖ್ಯಾತರ ಹೆಸರಿನಲ್ಲಿ ಜಾರಿಯಲ್ಲಿರುವ ವಿಶೇಷ ಸೌಲಭ್ಯಗಳು, ಕಾನೂನು, ಆಯೋಗ, ಮಂಡಳಿ, ಇಲಾಖೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net