ಕ್ರೀಡೆಯಿಂದ ಮಕ್ಕಳಲ್ಲಿ ಲವಲವಿಕೆ ಹೆಚ್ಚಳ: ಗೋಪಾಲಕೃಷ್ಣ ಬೇಳೂರು

13 RPT 1
ರಿಪ್ಪನ್‌ಪೇಟೆಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು. ಡಿ.ಎಂ.ದೇವರಾಜ್, ಧನಲಕ್ಷಿ÷್ಮÃ ಗಂಗಾಧರ್, ಕೃಷ್ಣಮೂರ್ತಿ, ಬಾಲಚಂದ್ರರಾವ್ ಇತರರಿದ್ದರು.
Published on

ರಿಪ್ಪನ್‌ಪೇಟೆ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ದೇಹ ಮತ್ತು ಮನಸ್ಸು ಲವಲವಿಕೆಯಿಂದ ಕೂಡಿರುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ೧೪ ವರ್ಷದೊಳಗಿನ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆ ಮನುಷ್ಯನ ಅವಿಭಾಜ್ಯ ಅಂಗ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೇಹದ ಸ್ನಾಯುಗಳು ಸದೃಢವಾಗಿರುವುದಲ್ಲದೆ ಮನಸ್ಸು ಆರೋಗ್ಯದಿಂದ ಇರುತ್ತದೆ ಎಂದರು.
ಬಾಲ್ಯದಲ್ಲಿ ನಾನೂ ಕ್ರೀಡೆಗಳಲ್ಲಿ ಪಾಲ್ಗೊಳ್ಳುತ್ತಿದ್ದೆ. ಹೈಜಂಪ್, ಲಾಂಗ್ ಜಂಪ್ ನನ್ನ ನೆಚ್ಚಿನ ಕ್ರೀಡೆಯಾಗಿದ್ದು ಹಲವು ವರ್ಷ ಪ್ರಥಮ ಸ್ಥಾನ ಪಡೆಯುತ್ತಿದ್ದೆ ಎಂದು ಬಾಲ್ಯ ದಿನಗಳನ್ನು ಮೆಲುಕು ಹಾಕಿದರು. ಇಂದಿನ ವಿದ್ಯಾರ್ಥಿಗಳಲ್ಲಿ ಆಟಕ್ಕಿಂತ ಪಾಠಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಅಲ್ಲದೆ ಮೊಬೈಲ್ ಹುಚ್ಚು ಹೆಚ್ಚಾಗಿ ಕ್ರಿಯಾಶೀಲತೆ, ಲವಲವಿಕೆ ಕಳೆದುಕೊಳ್ಳುತ್ತಿದ್ದಾರೆ. ಮೊಬೈಲ್ ಗೀಳು ಬಿಡುವುದರ ಜತೆಗೆ ಗುರು ಹಿರಿಯರನ್ನು, ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾಭ್ಯಾಸದಲ್ಲಿ ತೊಡಗಿಕೊಂಡಲ್ಲಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.
ಕ್ಷೇತ್ರದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದು ನನ್ನ ಗಮನದಲ್ಲಿದೆ. ಶಿಕ್ಷಕರ ನಿಯೋಜನೆ ಜತೆಗೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಕೊರತೆ ಉಂಟಾಗದAತೆ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ರಾಮಕೃಷ್ಣ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಿ.ಎಂ.ದೇವರಾಜ್, ಗ್ರಾಪಂ ಅಧ್ಯಕ್ಷೆ ಧನಲಕ್ಷಿ÷್ಮÃ ಗಂಗಾಧರ್, ಕ್ಷೇತ್ರ ಶಿಕ್ಷಣಾಽಕಾರಿ ಕೃಷ್ಣಮೂರ್ತಿ, ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಬಾಲಚಂದ್ರ ರಾವ್, ಸರ್ಕಾರಿ ನೌಕರ ಸಂಘದ ಬಸವಣ್ಯಪ್ಪ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ, ಮುಖ್ಯ ಶಿಕ್ಷಕ ರವಿ, ಗ್ರಾಪಂ ಸದಸ್ಯರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net