ತುಟ್ಟಿಭತ್ಯೆ ಹೆಚ್ಚಳ

09983415-8818-4e8e-a8ab-bdd9b2f11abffff
Published on

ಚಿತ್ರದುರ್ಗ: ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ರಾಜ್ಯಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಂಜುನಾಥ್ ಸ್ವಾಗತಿಸಿದ್ದಾರೆ.

ಭತ್ಯೆಯನ್ನು ಶೇ 3.75ಕ್ಕೆ ಹೆಚ್ಚಿಸಿ 6 ಲಕ್ಷ ರಾಜ್ಯ ಸರ್ಕಾರಿ ನೌಕರರು, 4.50ಲಕ್ಷ ಪಿಂಚಣಿದಾರರು, 3 ಲಕ್ಷ ನಿಗಮ ಮಂಡಳಿ ನೌಕರರಿಗೆ ಆರ್ಥಿಕ ಸೌಲಭ್ಯವನ್ನು ನೀಡುವ ಮೂಲಕ ಸರ್ಕಾರ ನೌಕರ ವರ್ಗದ ವಿಶ್ವಾಸಕ್ಕೆ ಪಾತ್ರವಾಗಿದೆ.

ನೌಕರರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮಂಜುನಾಥ್ ಹರ್ಷಿಸಿದ್ದಾರೆ.

----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net