ಇಚ್ಛಾಶಕ್ತಿಯಿಂದ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ: ಸಾರಿಗೆ ಸಚಿವ

B Sriramulu 140821
ಬಿ .ಶ್ರೀರಾಮುಲು, ಸಾರಿಗೆ ಸಚಿವ.
Published on

ಮೈಸೂರು: ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸಲು ಜೆಡಿಎಸ್ ಮತ್ತು ಕಾಂಗ್ರೆಸ್‌ಗೆ ರಾಜಕೀಯ ಇಚ್ಛಾಶಕ್ತಿ ಕೊರತೆ ಇತ್ತು. ಹೀಗಾಗಿ ಮಾಡಿರಲಿಲ್ಲ. ನಮಗೆ ಇಚ್ಛಾಶಕ್ತಿ ಇದ್ದ ಕಾರಣ ಮೀಸಲಾತಿ ಹೆಚ್ಚಳ ಮಾಡಿದವು ಎಂದು ಸಾರಿಗೆ ಸಚಿವ ಹೇಳಿದರು.


ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸುವ ಸಂಬಂಧ ಆಯೋಗವನ್ನು ಯಾರಾದರೂ ರಚಿಸಿರಬಹುದು. ಆದರೆ, ಮೀಸಲಾತಿ ಹೆಚ್ಚಳವನ್ನು ಅನುಷ್ಠಾನಕ್ಕೆ ತಂದಿರುವುದು ಮಾತ್ರ ಬಿಜೆಪಿ ಎಂದರು. ಇದರಲ್ಲಿ ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೊಡುಗೆ ಅಪಾರ ಎಂದರು.

ಕುರುಬರು ಸೇರಿದಂತೆ ಯಾವುದೇ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಅದಕ್ಕೆ ಕೆಲವು ನಿಯಮಗಳಿವೆ. ಕುಲಶಾಸ್ತ್ರೀಯ ಅಧ್ಯಯನ ನಡೆಯಬೇಕು. ಇದಕ್ಕಾಗಿ ಸಮಿತಿ ರಚನೆಯಾಗಬೇಕು, ಕೇಂದ್ರ ಸರ್ಕಾರವು ಸಮ್ಮತಿಸಬೇಕು ಎಂದು ಪ್ರತಿಕ್ರಿಯಿಸಿದರು.
ಸರ್ಕಾರಿ ಸಾರಿಗೆ ಬಸ್ ಪ್ರಯಾಣದರ ಹೆಚ್ಚಿಸುವ ಪ್ರಸ್ತಾಪವಿಲ್ಲ. ಗ್ರಾಮೀಣ ಪ್ರದೇಶಗಳಿಗೆ ಬಸ್‌ಗಳ ನಿಯೋಜನೆ ಮಾಡಲು ಆದ್ಯತೆ ನೀಡಲಾಗಿದೆ. ಕ್ರಮೇಣ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮೀರ್‌ಸಾದಿಕ್ ರಾಜಕಾರಣಿ. ಕಾಂಗ್ರೆಸ್ ಪಕ್ಷದಲ್ಲಿದ್ದ ದಲಿತ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸಿದರು ಎಂದು ವಾಗ್ದಾಳಿ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net