ಸೌಪರ್ಣಿಕಾ ನದಿ ನೀರಿನ ಪ್ರಮಾಣ ಹೆಚ್ಚಳ : ಎಕರೆಗಟ್ಟಲೆ ಕೃಷಿ ನಾಶ

paddy
ಬಡಾಕೆರೆಯಲ್ಲಿ ನಾಟಿ ಮಾಡಿದ ಕೃಷಿ ಭೂಮಿ ಸಂಪೂರ್ಣ ಜಲಾವೃತ
Published on

ಬೈಂದೂರು: ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ತಾಲೂಕಿನ ಹಲವಾರು ಗ್ರಾಮಗಳ ತಗ್ಗುಪ್ರದೇಶಗಳು ನೀರಿನಲ್ಲಿ ಮುಳುಗಿದ್ದು, ಕೆಲವು ಗ್ರಾಮಗಳಲ್ಲಿ ಎಕರೆಗಟ್ಟಲೆ ಕೃಷಿ ಭೂಮಿ ಸಂಪೂರ್ಣ ಹಾಳಾಗಿದೆ.

ಸೌಪರ್ಣಿಕಾ ನದಿ ನೀರಿನ ಪ್ರಮಾಣ ಅಪಾರ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಐದು ದಿನಗಳಿಂದ ನೆರೆ ಇಳಿಮುಖ ಕಾಣದಿರುವ ಪರಿಸ್ಥಿತಿ ಉಂಟಾದಾಗ ಭತ್ತದ ಕೃಷಿ ನಾಶವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನೆರೆ ಪಿಡಿತ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಾವುಂದ ಸಾಲ್ಬುಡ, ಅರೆಹೊಳೆ, ಕಂಡಿಕೇರಿ, ಬಡಾಕೆರೆ, ಹಡವು ಪಡುಕೋಣೆ, ಮರವಂತೆ, ಕೋಣ್ಕಿ, ಪರಿಸರದಲ್ಲಿ ಭಾರಿ ಮಳೆಯಿಂದಾಗಿ ಒಂದು ವಾರವಿಡೀ ನೆರೆ ಪರಿಸ್ಥಿತಿ ಉಂಟಾಗಿ, ಜನ ಮನೆಯಿಂದ ಹೊರಬಾರದ ಸ್ಥಿತಿ ನಿರ್ಮಾಣವಾಗಿ ಅಲ್ಲಿನ ನಿವಾಸಿಗರು ಅಕ್ಷರಶಃ ನಲುಗಿ ಹೋಗಿದ್ದರು. ಈ ವೇಳೆ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಹೆಕ್ಟೇರ್‌ಗಟ್ಟಲೆ ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡು, ನಾಟಿ ಮಾಡಿದ ಭತ್ತದ ಪೈರು ಕೊಳೆತು ಹೋಗಿತ್ತು. ಶನಿವಾರ ಮಳೆ ಇಲ್ಲದ ಕಾರಣ ಸ್ವಲ ಮಟ್ಟಿಗೆ ನೆರೆ ಇಳಿಮುಖ ಕಂಡಿದೆ ಮತ್ತೆ ಪುನಃ ಹೀಗೆ ಮಳೆ ಮುಂದುವರಿದರೆ ಮತ್ತೆ ಜಲ ದಿಗ್ಬಂಧನವೂ ಮುಂದುವರೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net