ಯಂತ್ರೋಪಕರಣ ಬಳಸಿ ಆದಾಯ ಹೆಚ್ಚಿಸಿಕೊಳ್ಳಿ: ಡಾ.ಯತೀಂದ್ರ ಸಿದ್ದರಾಮಯ್ಯ

12 - Copy
Published on

ಮೈಸೂರು: ಆಧುನಿಕ ಯಂತ್ರೋಪಕರಣಗಳನ್ನು ಉಪಯೋಗಿಸಿಕೊಂಡು ರೈತರು ತಮ್ಮ ಅದಾಯ ಹೆಚ್ಚಿಸಿಕೊಳ್ಳಬೇಕು ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದರು.
ತಾಲೂಕಿನ ವರುಣ ಹೋಬಳಿಯ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಬುಧವಾರ ಸಹಾಯಧನ ಯೋಜನೆ ಅಡಿ ಫಲಾನುಭವಿ ರೈತರಿಗೆ ಪವರ್ ಟಿಲ್ಲರ್ ಮತ್ತು ರೋಟರಿ ಟಿಲ್ಲರ್ ಯಂತ್ರೋಪಕರಣಗಳನ್ನು ವಿತರಿಸಿ ಮಾತನಾಡಿದರು.

ಪ್ರಸ್ತುತ ಸನ್ನಿವೇಷದಲ್ಲಿ ಕೂಲಿ ಆಳುಗಳ ಕೊರತೆ ಹೆಚ್ಚಾಗಿದೆ. ರೈತರು ತಮ್ಮ ದಿನನಿತ್ಯದ ಕೃಷಿ ಚಟುವಟಿಕೆ ನಿರ್ವಹಣೆಗೆ ಕೃಷಿ ಇಲಾಖೆ ವತಿಯಿಂದ ಸಹಾಯಧನದಲ್ಲಿ ದೊರೆಯುವ ಆಧುನಿಕ ಯಂತ್ರೋಪಕರಣಗಳ ಸೌಲಭ್ಯವನ್ನು ಪಡೆಯಬೇಕು. ಆ ಮೂಲಕ ವ್ಯವಸಾಯದಲ್ಲಿ ಖರ್ಚನ್ನು ಕಡಿಮೆಗೊಳಿಸಿ, ತಮ್ಮ ಆದಾಯವನ್ನು ಹೆಚ್ಚಳ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಿಎಂಕೆಎಸ್‌ವೈ ಯೋಜನೆಯಡಿ ಶೇ.90ರ ಸಹಾಯಧನದಲ್ಲಿ ತುಂತುರು ನೀರಾವರಿ ಘಟಕಗಳನ್ನು ಸಹ ವಿತರಣೆ ಮಾಡಲಾಗುತ್ತಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆಯಲು ಕೂಡಲೇ ಕೃಷಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಲು ತಿಳಿಸಿದರು.
ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಎಚ್.ಬಿ. ಮಧುಲತಾ, ಕೃಷಿ ಅಧಿಕಾರಿಗಳಾದ ಆನಂದ್‌ಕುಮಾರ್, ಪಿ.ಎನ್ ಜೀವನ್, ತಾಂತ್ರಿಕ ವ್ಯವಸ್ಥಾಪಕ ಎಸ್.ಜೆ. ಹೇಮಂತ್, ಸಿಬ್ಬಂದಿ ಪ್ರದೀಪ್, ಅಭಿಷೇಕ್ ಹಾಗೂ ಮುಖಂಡರಾದ ಮಹೇಶ್, ಮಂಜು, ಪ್ರಸನ್ನ, ರವಿ, ತಾಪಂ ಮಾಜಿ ಸದಸ್ಯ ಸಿದ್ದಯ್ಯ, ವರುಣ ಗ್ರಾಪಂ ಉಪಾಧ್ಯಕ್ಷೆ ಪುಷ್ಪಲತಾ ದೇವಣ್ಣ, ಸದಸ್ಯರಾದ ಮಹದೇವು, ಶಿವಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net