ಬೂತ್ ಮಟ್ಟದಲ್ಲಿ ಸದಸ್ಯತ್ವ ಸಂಖ್ಯೆ ಹೆಚ್ಚಿಸಿ

20 JYD 1
Published on

ಜೊಯಿಡಾ: ಪ್ರಧಾನಿ ನರೇಂದ್ರ ಮೋದಿಜಿ ಅವರು ದೇಶಕ್ಕಾಗಿ ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಅವರ ಜತೆಗೆ ಎಲ್ಲರೂ ಕೈಜೋಡಿಸೋಣ. ತಾಲೂಕಿನ ಅಭಿವೃದ್ಧಿ ನೋಡಿದರೆ ಶೂನ್ಯವಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸರಿಯಾಗಿ ಉತ್ತರ ನೀಡಬೇಕಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.

ಇಲ್ಲಿನ ಮುಖ್ಯ ಸರ್ಕಲ್‌ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರನ್ನು ಗೆಲ್ಲಿಸಬೇಕು. ಅದಕ್ಕೆ ಸದಸ್ಯತ ಅಭಿಯಾನದ ಮೂಲಕ ಜನರನ್ನು ಜಾಗೃತಿಗೊಳಿಸಬೇಕಿದೆ. ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿ, ಪ್ರತಿಯೊಬ್ಬ ಕಾರ್ಯಕರ್ತರು ಬೂತ್ ಮಟ್ಟದಲ್ಲಿ 300ಕ್ಕೂ ಹೆಚ್ಚು ಸದಸ್ಯತ್ವ ಮಾಡಬೇಕು ಎಂದರು.

ಬಿಜೆಪಿ ತಾಲೂಕಾಧ್ಯಕ್ಷ ಶಿವಾಜಿ ಗೋಸಾವಿ ಮಾತನಾಡಿದರು. ಸುಧಾಕರ ರೆಡ್ಡಿ, ಮಂಡಲದ ಪ್ರಧಾನ ಕಾರ್ಯದರ್ಶಿ ಅರುಣ ಕಾಮರೆಕರ, ತುಕಾರಾಮ ಮಾಂಜ್ರೇಕರ, ಸಂತೋಷ ರೆಡ್ಕರ, ಮಹಾಶಕ್ತಿ ಅಧ್ಯಕ್ಷ ಸಿದ್ದು ಜೋಕೇರಿ, ಸಂತೋಷ ಸಾವಂತ, ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಎಲ್ಲೇಕಾರ, ರೂಪೇಶ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net