ಕ್ರೀಡೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ವೃದ್ಧಿ

IMG-20240820-WA0228
Published on

ಅರಸೀಕೆರೆ ಗ್ರಾಮಾಂತರ : ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ವಿಶ್ವನಾಥ್ ತಿಳಿಸಿದರು.


ಬಾಣಾವರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೊಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯೂ ಮುಖ್ಯ. ಈ ನಿಟ್ಟಿಲ್ಲಿ ಪ್ರತಿಯೊಬ್ಬರು ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ಗೋಲು - ಗೆಲುವು ಸಾಮಾನ್ಯವಾದದ್ದು, ಸೋತರೂ ಹಾಗೂ ಗೆದ್ದರೂ ಸಮಾನ ಚಿತ್ತದಿಂದ ಸ್ವೀಕಾರ ಮಾಡಬೇಕು ಎಂದು ಸಲಹೆ ನೀಡಿದರು.


ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗೆ ಮಾತ್ರ ಸೀಮಿತವಾಗಬಾರದು. ಓದಿನೊಂದಿಗೆ ಆಟೋಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.


ಗ್ರಾಮ ಪಂಚಾಯತ್ ಸದಸ್ಯರಾದ ಬಿ.ಆರ್.ಶ್ರೀಧರ್, ಬಿ.ಎಚ್. ಸಂಜಯ್. ನಿವೃತ್ತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್, ಬಾಣವರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸುರೇಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ದೊರೇಶ್, ದೈಹಿಕ ಶಿಕ್ಷಣ ಪರೀವೀಕ್ಷಕ ವಸಂತ್ ಕುಮಾರ್, ಶಿಕ್ಷಣ ಸಂಯೋಜಕ ಹರೀಶ್ ಕುಮಾರ್, ಎಸ್‌ಡಿಎಮ್‌ಸಿ ಮಧುಕುಮಾರ್, ಇಂದ್ರ ಕುಮಾರ್ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net