

ರಾಯಚೂರು: ರಾಜ್ಯದಲ್ಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಗೌರವಧನವನ್ನು ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದಿಂದ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಮಹ್ಮದ್ ಆಸ್ೀಗೆ ಮನವಿ ಸಲ್ಲಿಸಿ, ಅರೆಕಾಲಿಕ ಉಪನ್ಯಾಸಕರಿಗೆ ಸೇವಾ ವಿಲೀನಾತಿ, ಸೇವಾ ಭದ್ರತೆ ಹಾಗೂ ಪ್ರತಿ ತಿಂಗಳು ನಿಯಮಿತವಾಗಿ ಗೌರವಧನ ಪಾವತಿಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಿಇ, ಎಂಟೆಕ್ ಮುಗಿಸಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೇವಲ 15 ಸಾವಿರ ರೂ. ಗೌರವಧನಕ್ಕೆ ಅರೆಕಾಲಿಕ ಉಪನ್ಯಾಸಕರು ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಾ ಬಂ್ದಾರೆ. ಬೇಡಿಕೆ ಈಡೇರಿಕೆಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ಸಿಗುತ್ತಿಲ್ಲ.
ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರತ, ಕೃಪಾಂಕ, ಸೇವಾ ಪ್ರಮಾಣಪತ್ರ ಹಾಗೂ ಅರ್ಹತೆ ಆಧಾರಿಸಿ ನೀಡುತ್ತಿರುವ ಗೌರವಧನವನ್ನು ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೂ ವಿಸ್ತರಣೆ ಮಾಡಬೇಕು. ಈಗಿರುವ 8 ತಿಂಗಳ ಕಾರ್ಯಭಾರವನ್ನು 12 ತಿಂಗಳಿಗೆ ವಿಸ್ತರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಮಲ್ಲಿಕಾರ್ಜುನ ಗುಂಜಳ, ಪದಾಕಾರಿಗಳಾದ ನಾಗರಾಜ ಬಸೇರಿ, ರಾಘವೇಂದ್ರ, ಎಂ.ಕೆ.ನಾಗರಾಜ, ಎಂ.ಶಿವಾನಂದ, ಜೆ.ನವೀನ, ಅರ್ಚನಾ, ಸುಮಾ, ಸಿ.ಪ್ರಿಯಾಂಕ ಪಾಲ್ಗೊಂಡಿದ್ದರು.