ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೆಚ್ಚಿದ ಒತ್ತಾಯ, ಸಚಿವ ಎಂ.ಬಿ. ಪಾಟೀಲ ಹೇಳಿದ್ದೇನು ಗೊತ್ತಾ?

M B PATIL DROUGHT MEETING
ವಿಜಯಪುರ ಜಿಪಂ ಸಭಾಂಗಣದಲ್ಲಿ ಸಚಿವ ಎಂ.ಬಿ. ಪಾಟೀಲರು ಬರ ನಿರ್ವಹಣೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
Published on

ವಿಜಯಪುರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಿಬಿಐ ತನಿಖೆ ನಡೆಸುತ್ತಿದೆ. ಆರೋಪ ಪಟ್ಟಿ ಇನ್ನೂ ಸಿಬಿಐ ಬಳಿಯೇ ಇದೆ. ವರದಿ ಸಲ್ಲಿಕೆಯಾದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ಹೀಗಾಗಿ ಆ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ. ಈ ವಿಷಯದಲ್ಲಿ ನಮ್ಮ ಪಕ್ಷ ಡಿ.ಕೆ. ಶಿವಕುಮಾರ ಪರವಾಗಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಪ್ರತಿಕ್ರಿಯಿಸಿದರು.

ರಾಜ್ಯಾದ್ಯಂತ ಕೇಳಿ ಬರುತ್ತಿರುವ ಡಿ.ಕೆ. ಶಿವಕುಮಾರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ. ಪಾಟೀಲ, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಬೇಕೆಂದು ನ್ಯಾಯಾಲಯ ಸೂಚಿಸಿದೆ. ಡಿ.ಕೆ. ಶಿವಕುಮಾರ ಅವರು ತಮ್ಮದೇ ಕಾನೂನು ತಜ್ಞರನ್ನಿಟ್ಟುಕೊಂಡು ಪ್ರಕರಣ ಎದುರಿಸುತ್ತಿದ್ದಾರೆ. ಕಾನೂನು ಸಹ ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂದರು.

ಸಿಬಿಐ ಬಳಿ ಆರೋಪ ಪಟ್ಟಿ ಇದೆ. ಇನ್ನೂ ತನಿಖೆ ವರದಿ ಸಲ್ಲಿಕೆಯಾಗಬೇಕು. ಆಗಲೇ ರಾಜೀನಾಮೆ ಕೇಳುವುದು ತರವಲ್ಲ ಎಂದು ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net