ನಿರಂತರ ಕಲಿಕೆಯಿಂದ ಕ್ರಿಯಾಶೀಲತೆ ಹೆಚ್ಚಳ

22 HANUR 3
Published on


ಚಾಮರಾಜನಗರ : ನಿರಂತರ ಕಲಿಕೆಯಿಂದ ಮಾತ್ರ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ತಿಳಿಸಿದರು.


ಹನೂರು ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ಬುಧವಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ಧ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಪಠ್ಯ ಚಟುವಟಿಕೆಗಳು ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಯ ಜತೆಗೆ ಒತ್ತಡ ನಿವಾರಣೆಗೂ ಸಹಕಾರಿಯಾಗಿದೆ ಎಂದರು.


ನಿರಂತರ ಕಲಿಕೆಯಿಂದ ಶಿಕ್ಷಕರಲ್ಲಿ ಬೋಧನೆಯಲ್ಲಿ ಕ್ರಿಯಾಶೀಲತೆ ಬೆಳೆಯುತ್ತದೆ. ಸೃಜನಶೀಲತೆಯೂ ಹೆಚ್ಚುತ್ತದೆ. ಇದಕ್ಕೆಲ್ಲ ಸಹಪಠ್ಯ ಚಟುವಟಿಕೆ ಸಹಕಾರಿಯಾಗಲಿದೆ ಎಂದರು.


ಇದೇ ವೇಳೆ ಶಿಕ್ಷಕರಿಗೆ ಜನಪದ ಗೀತೆ, ರಸಪ್ರಶ್ನೆ, ಪ್ರಬಂಧ, ಆಶುಭಾಷಣ, ಚಿತ್ರ ಬಿಡಿಸುವ ಸ್ಪರ್ಧೆ, ಸ್ಥಳದಲ್ಲೇ ಪೀಠೋಪಕರಣ ತಯಾರಿಕೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.


ಪ್ರಭಾರ ಉಪ ನಿರ್ದೇಶಕ ಲಕ್ಷ್ಮೀಪತಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅಮಲ್‌ದಾಸ್, ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರೀಶ್, ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಶಿಕ್ಷಣ ಸಂಯೋಜಕ ಕಂದವೇಲು, ಕಿರಣ್‌ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net