ಎಳವೆಯಲ್ಲಿ ಮೂಡಿಸಿ ಗಣಿತದ ಆಸಕ್ತಿ, ಹಿರಿಯ ಉಪನ್ಯಾಸಕ ಶ್ರೀನಿವಾಸ ಅಡಿಗ ಸಲಹೆ

Published on

ಮಂಗಳೂರು: ಗಣಿತದ ಮೇರು ಸಾಧಕ ಶ್ರೀನಿವಾಸ ರಾಮಾನುಜನ್ ಜನ್ಮದಿನಾಚರಣೆಯ ಪ್ರಯುಕ್ತ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಡಯಟ್‌ಮಂಗಳೂರಿನ ಸಹಯೋಗದಲ್ಲಿ ಜಿಲ್ಲೆಯ ಗಣಿತ ಅಧ್ಯಾಪಕರಿಗೆ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರ ಉದ್ಘಾಟಿಸಿದ ಡಯಟ್‌ನ ಹಿರಿಯ ಉಪನ್ಯಾಸಕ ಶ್ರೀನಿವಾಸ ಅಡಿಗ ಮಾತನಾಡಿ, ಜೀವನದ ಎಲ್ಲ ಪ್ರಕಾರಗಳಲ್ಲೂ ಗಣಿತ ಪ್ರಮುಖವಾಗುತ್ತದೆ. ಹಾಗಾಗಿ ಅದರ ಬಗ್ಗೆ ಎಳವೆಯಲ್ಲಿ ಆಸಕ್ತಿ ಮೂಡಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್, ವಿಶ್ವದಾದ್ಯಂತ ಗಣಿತ ವಿಷಯವನ್ನು ಸುಲಭವಾಗಿ ಅರ್ಥೈಸುವಂತೆ ಮಾಡಲು ಎಲ್ಲ ಹಂತಗಳಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಭಾರತ ಪ್ರಾಚೀನ ಕಾಲದಿಂದಲೂ ಈ ಕ್ಷೇತ್ರದಲ್ಲಿ ತನ್ನ ಪ್ರತಿಭೆಯನ್ನು ಮೆರೆದಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುಬ್ರಹ್ಮಣ್ಯ ಭಟ್, ದೀಕ್ಷಿತಾ ಎಸ್.ಟಿ. ಮತ್ತು ವೀಣಾ ಜಿ., ಪ್ರಾತ್ಯಕ್ಷಿಕೆಗಳೊಂದಿಗೆ ಗಣಿತದ ಮೂಲ ಸಿದ್ಧಾಂತಗಳನ್ನು ವಿವರಿಸಿದರು. ಇನ್ನೊವೇಶನ್ ಹಬ್ ಮೆಂಟರ್ ಅಂಬಿಕಾ ಸ್ವಾಗತಿಸಿದರು. ಕೇಂದ್ರದ ಕ್ಯುರೇಟರ್ ಜಗನ್ನಾಥ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net