

ನ್ಯಾಮತಿ: ನಿರಂತರ ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಾಲಬಾಧೆಯಿಂದ ಬೇಸತ್ತ ತಾಲೂಕಿನ ಕುಂಕುವ ಗ್ರಾಮದ ರೈತ ನರಸಿಂಹಪ್ಪ (38) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೀಜ, ಗೊಬ್ಬರ ಸೇರಿದಂತೆ ಕೃಷಿ ಚಟುವಟಿಕೆಗಳಿಗಾಗಿ ಕೃಷಿ ಉತ್ಪನ್ನ ಸಹಕಾರಿ ಸಂಘ, ಖಾಸಗಿ ಸಾಲ ಸೇರಿ ಸುಮಾರು 3 ಲಕ್ಷ ರೂ. ಸಾಲ ಮಾಡಿದ್ದರು.
ಆದರೆ, ಕಳೆದ 2-3 ವರ್ಷಗಳಿಂದ ಬೆಳೆ ಸರಿಯಾಗಿ ಕೈಹಿಡಿಯದ ಹಿನ್ನೆಲೆಯಲ್ಲಿ ಸಾಲ ತೀರಿಸುವ ದಾರಿ ಕಾಣದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತನ ಪತ್ನಿ ದೂರು ನೀಡಿದ್ದಾರೆ.
ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.