

ಹಾವೇರಿ: ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಭರಡಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಹನುಮಂತಪ್ಪ ಭೀಮಪ್ಪ ಕಿಳ್ಳಿಕ್ಯಾತರ (36) ಮೃತ ರೈತ.
ಇವರು ಕೆವಿಜಿ ಬ್ಯಾಂಕ್ನಲ್ಲಿ 6 ಲಕ್ಷ ರೂ. ಹಾಗೂ ಖಾಸಗಿ ಫೈನಾನ್ಸ್ನಲ್ಲಿ 5.36 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಮಳೆ ಕೊರತೆಯಿಂದ ಬೆಳೆ ಹಾಳಾದ ಕಾರಣ ಸಾಲ ತೀರಿಸಲಾಗದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.