

ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಯಡಚಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಹನುಮಂತಪ್ಪ ರುದ್ರಪ್ಪ ಸಣ್ಣಪ್ಪನವರ (24) ಮೃತ ರೈತ.
ಇವರು 4 ಎಕರೆ ಜಮೀನು ಹೊಂದಿದ್ದು 2.35 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಮಳೆಯಿಂದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.