ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಲ್ಲೂರ ಬಡ್ನಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಗ್ರಾಮದ ಸಿದ್ದಪ್ಪ ರಾಮಣ್ಣ ವಗ್ಗನವರ (55) ಮೃತ ರೈತ.

ಇವರು ಬ್ಯಾಂಕ್​ ಹಾಗ ಕೈಡವಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಮಳೆ ಅಧಿಕವಾಗಿದ್ದರಿಂದ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net