

ಬಂಕಾಪುರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಘಟನೆ ಇಲ್ಲಿಗೆ ಸಮೀಪದ ಕಲ್ಯಾಣ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮಂಜುನಾಥ ಬಸಪ್ಪ ಬರದೂರ (25) ಮೃತ ರೈತ.
ಇವರು 4.65 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಬೆಳೆ ಸರಿಯಾಗಿ ಬಾರದ ಕಾರಣ ನಷ್ಟ ಅನುಭವಿಸಿದ್ದರು. ಇದರಿಂದ ಸಾಲ ತೀರಿಸಲಾಗದೆ ಮನೆಯ ಹಿಂಭಾಗದ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.