

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಷಣ್ಮುಕಪ್ಪ ಶಿವಬಸಪ್ಪ ಪೂಜಾರ (56) ಆತ್ಮಹತ್ಯೆ ಮಾಡಿಕೊಂಡ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 5 ಲಕ್ಷ ರೂ.ಗೂ ಅಧಿಕ ಸಾಲ ಮಾಡಿಕೊಂಡಿದ್ದರು. ಅತಿಯಾದ ಮಳೆಯಿಂದ ಜಮೀನಿನಲ್ಲಿ ಬೆಳೆದ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.