ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

crime logo
Published on

ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೊಂಡೂರ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಬಸವರಾಜ ಉಡಚಪ್ಪ ಬಾಕಿರ್ (46) ಮೃತ ರೈತ.

ಇವರು ಬ್ಯಾಂಕ್​ ಹಾಗೂ ಕೈಗಡವಾಗಿ 3.75 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಮನನೊಂದು ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net