ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಾಕೋಳ ಗ್ರಾಮದಲ್ಲಿ ಗುರುವಾರ ನಡೆದಿದೆ.

ಹನುಮಂತಪ್ಪ ಗೂಳಪ್ಪ ಕರಬಣ್ಣನವರ (48) ಮೃತ ರೈತ.

ಇವರು ಕೃಷಿಗಾಗಿ ಬ್ಯಾಂಕ್​ ಹಾಗೂ ಕೈಗಡವಾಗಿ 3.80 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಮಳೆ ಕೊರತೆಯಿಂದ ಬೆಳೆ ಹಾಳಾಗಿದ್ದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net