ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ಹಾವೇರಿ: ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆನಕನಹಳ್ಳಿಯಲ್ಲಿ ಗುರುವಾರ ನಡೆದಿದೆ.

ಶಿವರಾಜ ಮಲ್ಲಪ್ಪ ಬಣಕಾರ (30) ಮೃತ ರೈತ.

ಇವರು 2.20 ಎಕರೆ ಜಮೀನು ಹೊಂದಿದ್ದು ಕೃಷಿಗಾಗಿ ಬ್ಯಾಂಕ್​ ಹಾಗೂ ಕೈಗಡವಾಗಿ 8 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದ ಬೆಳೆ ಸಂರ್ಪೂಣ ಹಾಳಾಗಿತ್ತು. ಇದರಿಂದ ಬೇಸತ್ತು ಜಮೀನಿನ ಬಳಿಯಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net