

ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಮಾದಾಪುರ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಹೇಮಪ್ಪ ಬಸಲಿಂಗಪ್ಪ ಬಣಕಾರ (53) ಮೃತ ರೈತ.
ಇವರು 4 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಹಾಗೂ ಕೈಗಡವಾಗಿ 13.50 ಲಕ್ಷ ರೂ. ಸಾಲ ಪಡೆದುಕೊಂಡು ಕೃಷಿ ಮಾಡಿದ್ದರು. ಆದರೆ, ಎರಡ್ಮೂರು ವರ್ಷಗಳಿಂದ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.