ಸಾಲಬಾಧೆಯಿಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

Formar Suside+1
Published on

ಹಾವೇರಿ: ಸಾಲಬಾಧೆಯಿಂದ ರೈತನೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಕ್ಕಲಿಂಗದಹಳ್ಳಿಯಲ್ಲಿ ಗುರುವಾರ ಸಂಭವಿಸಿದೆ.
ಗ್ರಾಮದ ನಾಗೇಂದ್ರ ಮಂಜಪ್ಪ ಮಲ್ಲಾಡದ (36) ಮೃತ ರೈತ.
ಇವರು ಬ್ಯಾಂಕ್ ಹಾಗೂ ವಿವಿಧ ಖಾಸಗಿ ಫೈನಾನ್ಸ್‌ನಲ್ಲಿ 6.30 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಮಳೆ ಸರಿಯಾಗಿ ಬಾರದ ಕಾರಣ ಬೆಳೆ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net