

ಬ್ಯಾಡಗಿ: ಸಾಲಬಾಧೆಯಿಂದ ಯುವ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಾಶಂಬಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಲವಿಕುಮಾರ ಬೀರಪ್ಪ ತಾವರಗೊಪ್ಪ (22) ಮೃತ ರೈತ.
ಈತ ಬ್ಯಾಂಕ್‌ನಲ್ಲಿ ತಂದೆ ಹೆಸರಿನಲ್ಲಿ 1.80 ಲಕ್ಷ ರೂ. ಸಾಲ ಮಾಡಿಕೊಂಡಿದ್ದನು. ಜಮೀನಿನಲ್ಲಿ ಬೆಳೆದ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.