

ಬಂಕಾಪುರ: ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ಹೋತನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ಕರಬಸಪ್ಪ ಶೇಖಪ್ಪ ಗೂಳಣ್ಣನವರ (34) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 6 ಲಕ್ಷ ರೂ. ಸಾಲ ಮಾಡಿದ್ದರು. ಸರಿಯಾಗಿ ಮಳೆ ಬಾರದ ಕಾರಣ ಬೆಳೆ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.