

ಶಿಗ್ಗಾಂವಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಶೇಖಪ್ಪ ಬಸಪ್ಪ ಮರಿದ್ಯಾಮಣ್ಣನವರ (46) ಮೃತ ರೈತ.
ಇವರು ಕೃಷಿಗಾಗಿ 4.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಮಳೆ ಕೊರತೆಯಿಂದ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.