

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ವೀರಯ್ಯ ಸದಾಶಿವಯ್ಯ ಸುತ್ತಲಬಾವಿಮಠ (೪೬) ಮೃತ ರೈತ.
ಇವರು ಬ್ಯಾಂಕ್ ಹಾಗೂ ಸಹಕಾರಿ ಸಂಘದಲ್ಲಿ ೩.೧೦ ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ ಸರಿಯಾಗಿ ಮಳೆ ಬಾರದ ಕಾರಣ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ಜಮೀನಿನಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.