ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಮೇಡ್ಲೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ದೇವೇಂದ್ರಪ್ಪ ಹುಚ್ಚಪ್ಪ ಬಡಪ್ಪಳವರ (41) ಮೃತ ರೈತ.
ಇವರು 4 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್​ನಲ್ಲಿ 3.40 ಲ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ಹಾಳಾಗಿತ್ತು. ಇದರಿಂದ ಮನನೊಂದು ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net