ಸಾಲಬಾಧೆಯಿಂದ ಕೆರೆಗೆ ಹಾರಿ ರೈತ ಆತ್ಮಹತ್ಯೆ

Crime Logo
Published on

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಶಿವಬಸಪ್ಪ ಶಿವರುದ್ರಪ್ಪ ಗಾಣಗೇರ (65) ಮೃತ ರೈತ.

ಇವರು ಬ್ಯಾಂಕ್​ ಹಾಗೂ ಕೈಗಡವಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ನಿರಂತರ ಮಳೆಯಿಂದ ಬೆಳೆ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net