ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬುಡಪನಹಳ್ಳಿಯಲ್ಲಿ ಸೋಮವಾರ ನಡೆದಿದೆ.

ಬೀರಪ್ಪ ನಾಗಪ್ಪ ಗೊರವರ (42) ಮೃತ ರೈತ.

ಇವರು ಬ್ಯಾಂಕ್​ನಲ್ಲಿ 3 ಲಕ್ಷ ರೂ. ಬೆಳೆಸಾಲ ತೆಗೆದುಕೊಂಡು ಕೃಷಿ ಮಾಡಿಕೊಂಡಿದ್ದರು. ಆದರೆ, ಅತಿವೃಷ್ಟಿಯಿಂದ ಬೆಳೆಹಾನಿಯಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net