ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮದ ಮಂಜಪ್ಪ ಶಿವಾಜಪ್ಪ ಕುರಿಯವರ (54) ಮೃತ ರೈತ.
ಇವರು ಬ್ಯಾಂಕ್‌ನಲ್ಲಿ 1.60 ಲಕ್ಷ ರೂ. ಹಾಗೂ ಸೊಸೈಟಿಯಲ್ಲಿ 93 ಸಾವಿರ ರೂ. ಮತ್ತು ಕೈಗಡವಾಗಿ 3ರಿಂದ 4 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಅತಿವೃಷ್ಠಿ ಹಾಗೂ ಅನಾವೃಷ್ಟಿಯಿಂದ ಹಾಳಾಗಿತ್ತು. ಇದರಿಂದ ಮನನೊಂದು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net