ಸಾಲಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ

Crime Logo
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಲಿಂಗದಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಬಸವರಾಜ ನಾಗಪ್ಪ ಗುಡಕೇರಿ (25) ಮೃತ ರೈತ.
ಇವರು ಬ್ಯಾಂಕ್ ಹಾಗೂ ಖಾಸಗಿ ಫೈನಾನ್ಸ್‌ನಲ್ಲಿ 5.45 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಮಳೆ ಬಾರದ ಕಾರಣ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ಕಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net