ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ಹಾವೇರಿ: ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಗುರುವಾರ ನಡೆದಿದೆ.
ಗ್ರಾಮದ ಪರಮೇಶಗೌಡ ಚಂದ್ರಗೌಡ ಕರೇಗೌಡ್ರ (32) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 4.50 ಲಕ್ಷ ರೂ. ಸಾಲ ಮಾಡಿಕೊಂಡು ಕರಷಿ ಮಾಡಿದ್ದರು. ಆದರೆ, ಮಳೆ ಸರಿಯಾಗಿ ಬಾರದ ಕಾರಣ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net