ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತಳ್ಳಿಹಳ್ಳಿಯಲ್ಲಿ ಗುರುವಾರ ಸಂಭವಿಸಿದೆ.

ಆನಂದ ಗಿರಿಮಲ್ಲಯ್ಯ ದೇವಗೇರಿಮಠ (39) ಮೃತ ರೈತ.

ಇವರು ಜಮೀನಿನಲ್ಲಿ ಬೋರ್​ವೆಲ್​ ಕೊರೆಯಿಸುವ ಸಲುವಾಗಿ ಹಾಗೂ ಕೃಷಿಗಾಗಿ ಸಾಲ ಮಾಡಿಕೊಂಡಿದ್ದರು. ಆದರೆ, ಮಳೆ ಸರಿಯಾಗಿ ಬಾರದೆ ಬೆಳೆ ನಷ್ಟವಾಗಿದ್ದರಿಂದ ಮನನೊಂದು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net