ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಡೂರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಬಸಪ್ಪ ಭರಮಪ್ಪ ದೋಣೆಪ್ಪನವರ (50) ಮೃತ ರೈತ.

ಇವರು ಬ್ಯಾಂಕ್​ ಹಾಗೂ ಕೈಗಡವಾಗಿ 6.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net