

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೊಳೆಆನ್ವೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಪರಮೇಶಪ್ಪ ಪುಟ್ಟಪ್ಪ ಪೂಜಾರ (63) ಮೃತ ರೈತ.
ಇವರು ಬ್ಯಾಂಕ್ನಲ್ಲಿ 1.30 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅತಿವೃಷ್ಟಿಯಿಂದ ಬೆಳೆ ಸರಿಯಾಗಿ ಬಾರದೆ ನಷ್ಟ ಅನುಭವಿಸಿದ್ದರು. ಇದರಿಂದ ಸಾಲ ತೀರಿಸಲಾಗದೆ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.