ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Former sucide+2
Published on

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಅಜೀಜ್​ಸಾಬ ಹುಸ್ಮಾನಸಾಬ ಬಾಲೇನವರ (38) ಮೃತ ರೈತ.

ಇವರು ಬ್ಯಾಂಕ್​ ಹಾಗೂ ಫೈನಾನ್ಸ್​ಗಳಲ್ಲಿ ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಕ್ಯಾಬೇಜ್​ ಬೆಳೆ ಅತಿವೃಷ್ಟಿಯಿಂದ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net