ಸಾಲಬಾಧೆಯಿಂದ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ

Formar Suside
Published on

ಬ್ಯಾಡಗಿ: ಸಾಲಬಾಧೆಯಿಂದ ಒಂದೇ ದಿನ ಇಬ್ಬರು ರೈತರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬುಡಪನಹಳ್ಳಿ ಹಾಗೂ ಕಳಗೊಂಡ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಬುಡಪನಹಳ್ಳಿಯ ಫಕ್ಕೀರಪ್ಪ ದಿಳ್ಳೆಪ್ಪ ಮೇಡ್ಲೇರಿ (68) ಹಾಗೂ ಕಳಗೊಂಡ ಗ್ರಾಮದ ವೀರಭದ್ರಗೌಡ ಕಲ್ಲನಗೌಡ ಪಾಟೀಲ (36) ಮೃತ ರೈತರು.
ಫಕ್ಕೀರಪ್ಪ 3.5 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಹಾಗೂ ಕೈಗಡವಾಗಿ 6.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆ ಸಂಪೂರ್ಣ ಹಾಳಾಗಿತ್ತು. ಇದರಿಂದ ಮನನೊಂದು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೀರಭದ್ರಗೌಡ ಬ್ಯಾಂಕ್ ಹಾಗೂ ಖಾಸಗಿ ಫೈನಾನ್ಸ್‌ನಲ್ಲಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಬೆಳೆ ಬಾರದೆ ನಷ್ಟ ಅನುಭವಿಸಿದ ಕಾರಣ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net