ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲು ಆಗ್ರಹ

INDIRA CANTEEN NEW
Published on

ಹುಬ್ಬಳ್ಳಿ : ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಹಾಗೂ ಇತರ ಸ್ಥಳಗಳಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ಅಧ್ಯಕ್ಷೆ ತಾರಾದೇವಿ ವಾಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬಸವರು, ನಿರ್ಗತಿಕರು, ಕಾರ್ವಿುಕರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟಿನ್​ಗಳು ಹುಬ್ಬಳ್ಳಿ-ಧಾರವಾಡದಲ್ಲಿ ಬಾಗಿಲು ಮುಚ್ಚಿವೆ. ಇದರಿಂದ ಸಾಕಷ್ಟು ಜನರಿಗೆ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.

ಅಗ್ಗ ದರದಲ್ಲಿ ಉಪಹಾರ ಹಾಗೂ ಊಟ ನೀಡುತ್ತಿದ್ದ ಇಂದಿರಾ ಕ್ಯಾಂಟಿನ್​ಗಳು ಬಡವರ ಹಸಿವು ನೀಗಿಸುತ್ತಿದ್ದವು. ಆದರೆ, ಈ ಹಿಂದಿನ ಬಿಜೆಪಿ ಸರ್ಕಾರ ರಾಜಕೀಯ ಕಾರಣಕ್ಕಾಗಿ ಅಗತ್ಯ ಅನುದಾನ ನೀಡದ ಕಾರಣ ಇಂದಿರಾ ಕ್ಯಾಂಟಿನ್​ಗಳು ಬಾಗಿಲು ಮುಚ್ಚಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಅನುದಾನ ನೀಡುವ ಮೂಲಕ ಈ ಕ್ಯಾಂಟಿನ್​ಗಳನ್ನು ಮತ್ತೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net